Home ಟಾಪ್ ಸುದ್ದಿಗಳು ಬಂಟ್ವಾಳ: ಸುಜೀರು ಶಾಲೆಯ ಮುಖ್ಯೋಪಾಧ್ಯಾಯಿನಿ ಶಶಿಮಂಗಳಗೆ ಬೀಳ್ಕೋಡುಗೆ ಕಾರ್ಯಕ್ರಮ

ಬಂಟ್ವಾಳ: ಸುಜೀರು ಶಾಲೆಯ ಮುಖ್ಯೋಪಾಧ್ಯಾಯಿನಿ ಶಶಿಮಂಗಳಗೆ ಬೀಳ್ಕೋಡುಗೆ ಕಾರ್ಯಕ್ರಮ

ಬಂಟ್ವಾಳ: 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೋಡುಗೆ ಕಾರ್ಯಕ್ರಮ ಸುಜೀರು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಯಿತು.

ಈ ಸಂದರ್ಭ ಎಸ್ ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಮಾತನಾಡಿ, ಸುಜೀರು ಶಾಲೆಗೆ ಶಶಿಮಂಗಳ ರೀತಿಯ ಮುಖ್ಯೋಪಾಧ್ಯಾಯಿನಿ ಸಿಗಲು ಸಾಧ್ಯವಿಲ್ಲ. ಶಶಿ ಮಂಗಳ ಅವರು ವಿದ್ಯಾರ್ಥಿಗಳು ಹಾಗೂ ಪಾಲಕರ ಮನ ಗೆದ್ದಿದ್ದಾರೆ. ಅವರು ಇಂದಿನ ಶಿಕ್ಷಕರಿಗೆ ಮಾದರಿ ಎಂದರು.

ಎಸ್ ಡಿಎಂಸಿ ಮಾಜಿ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ಮಾತನಾಡಿ, ಶಶಿಮಂಗಳ ಅವರು ಸಹನೆ ಸಾಧನೆ ಉಳ್ಳರು. ವಿದ್ಯಾರ್ಥಿಗಳಿಗೆ ಒಳ್ಳೆಯ ನಾಗರಿಕರನ್ನಾಗಿ ಮಾಡಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡೆಗೆ ಪ್ರೋತ್ಸಾಹ ಮಾಡಿದ್ದಾರೆ ಎಂದು ನುಡಿದರು. ಪುದು ಗ್ರಾ.ಪಂ. ಮಾಜಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಇಡೀ ಜಿಲ್ಲೆಯಲ್ಲಿ ಉತ್ತಮ ಶಿಕ್ಷಕಿ ಎಂದರು.

ನಿವೃತ್ತ ಶಿಕ್ಷಕ ಮೊಹಮ್ಮದ್ ತುಂಬೆ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರವಿದೆ. ಶಶಿಮಂಗಳ ಅವರು ಮೃದು ಸ್ವಭಾವದವರು. ಅಭಿವೃದ್ಧಿ ದೃಷ್ಟಿಯಲ್ಲಿ ಕೆಲಸ ಕಾರ್ಯ ಮಾಡಿದ್ದಾರೆ ಎಂದು ಹೇಳಿದ್ದಾರೆ

ಮುಖ್ಯೋಪಾಧ್ಯಾಯಿನಿ ಶಶಿಮಂಗಳ ಅವರು ಮತನಾಡಿ, ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ನಾನು ಶಿಕ್ಷಕಿಯಾಗುವ ಗುರಿಯನ್ನು ಇಟ್ಟುಕೊಂಡಿಲ್ಲ. ಶಿಕ್ಷಕ ವೃತಿ ಜೀವಂತ ಇರುವ ವ್ಯಕ್ತಿಗಳ ಜೊತೆ ಮಾಡುವ ವೃತ್ತಿ ಎಂದರು. ಸಹೋದ್ಯೋಗಿಗಳಿಗೆ ಧನ್ಯವಾದ ಸಲ್ಲಿಸಿದರು.ಶಿಕ್ಷಕರಲ್ಲಿನ ಸಂಸ್ಕಾರ, ಸಂಸ್ಕೃತಿ, ಸಮಯಪಾಲನೆ, ಸೌಮ್ಯತೆ, ಪ್ರಾಮಾಣಿಕತೆಯಂತಹ ಗುಣಗಳನ್ನು ಯುವಪೀಳಿಗೆಗೆ ಧಾರೆಯೆರೆಯಬೇಕು. ಭವಿಷ್ಯ ಭಾರತದಲ್ಲಿನ ಉತ್ತಮ ಸಮಾಜದ ಅಭಿವೃದ್ಧಿಗೆ ಶಿಕ್ಷಕರು ಪ್ರಯತ್ನಿಸಬೇಕು ಎಂದರು.

ಪುದು ಗ್ರಾಮ ಪಂಚಾಯತ್ ಅಧ್ಯಕ್ಷೆ ರಶೀದ, ಉಪಧ್ಯಕ್ಷ ಇಕ್ಬಾಲ್ ಸುಜೀರ್, ಟಿಕೆ ಬಶೀರ್, ಅಬ್ದುಲ್ ಮಾಜೀದ್, ಭಾಸ್ಕರ್ ರೈ ಉಪಸ್ಥಿತರಿದ್ದರು. ಶಾಲೆಯ ಎಸ್ ಡಿಎಂಸಿ ಗಣ್ಯರಿಗೆ ಧನ್ಯವಾದ ಸಲ್ಲಿಸಿದರು.

Join Whatsapp
Exit mobile version