ಬಂಟ್ವಾಳ | ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರ್ ದಾಳಿ

Prasthutha|

ಮಂಗಳೂರು: ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ.

ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಈ ದಾಳಿ ನಡೆದಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.

ಈ ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರ್ ದಾಳಿ ನಡೆಸಲಾಗಿದೆ ಎಂಬ ಸಂದೇಶ ಹರಿದಾಡುತ್ತಿದ್ದು, ಈ ಬಗ್ಗೆ ದ.ಕ ಎಸ್ಪಿ ಸ್ಪಷ್ಟನೆ ನೀಡಿ, “ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರ್ ನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.

- Advertisement -