Home ಕರಾವಳಿ ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು

ಬಂಟ್ವಾಳ: ವಗ್ಗ ಸಮೀಪದ ಅಂಚಿಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಮಗುಚಿ ಬಿದ್ದಿದೆ.

ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರು ಚಾಲಕ ಸಾಹಿಕ್, ಸಹ ಪ್ರಯಾಣಿಕರಾದ ಶಾಹಿನಾ, ಫೌಝಿಯಾ, ಸೌಧಾ ಮತ್ತು 6 ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಗೊಂಡ ಎಲ್ಲರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version