Home ಟಾಪ್ ಸುದ್ದಿಗಳು ಬಂಟ್ವಾಳ | ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಲಾರಿ

ಬಂಟ್ವಾಳ | ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.


ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.


ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ 12.45 ರ ಸುಮಾರಿಗೆ ಬಿದ್ದಿದೆ ಎನ್ನಲಾಗಿದೆ.

Join Whatsapp
Exit mobile version