Home ಕರಾವಳಿ ಬಂಟ್ವಾಳ | ಯುವತಿ ಸ್ನಾನ ಮಾಡುವಾಗ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಜಗದೀಪ್ ಆಚಾರ್ಯ ಪೊಲೀಸ್ ವಶಕ್ಕೆ

ಬಂಟ್ವಾಳ | ಯುವತಿ ಸ್ನಾನ ಮಾಡುವಾಗ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಜಗದೀಪ್ ಆಚಾರ್ಯ ಪೊಲೀಸ್ ವಶಕ್ಕೆ

ಬಂಟ್ವಾಳ: ಯುವತಿ ಶೌಚಾಲಯದಲ್ಲಿ ಸ್ನಾನ ಮಾಡುತ್ತಿರುವಾಗ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಜಗದೀಪ್ ಆಚಾರ್ಯ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ‌ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ. ಯುವತಿ ಇದನ್ನು ಕಂಡು ಜೋರಾಗಿ ಬೊಬ್ಬೆ ಹಾಕಿದ್ದು, ಅಪರಿಚಿತ ಆರೋಪಿ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಡಿಯೋ ಚಿತ್ರೀಕರಣ ಮಾಡಿದ ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Join Whatsapp
Exit mobile version