ಬಂಟ್ವಾಳ: ಉದ್ಯೋಗವಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

Prasthutha|

ಬಂಟ್ವಾಳ: ಅನಾರೋಗ್ಯ, ಉದ್ಯೋಗ ಇಲ್ಲ ಎಂದು ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

- Advertisement -


ಮಿತ್ತಮಜಲು ನಿವಾಸಿ ಚಿತ್ರಕಾರ ಸಾಗರ್ ಆಚಾರ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವಕ.


ಬೆಳಿಗ್ಗೆ ಸುಮಾರು 8.30 ರ ವೇಳೆ ಮನೆಯಂಗಳದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಗರ್ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ನಿಗೂಢವಾಗಿದೆಯಾದರೂ ಆತನ ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ.

Join Whatsapp