ಬಂಟ್ವಾಳ | ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

Prasthutha|

ಬಂಟ್ವಾಳ:  ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಪಾಣೆಮಂಗಳೂರಿನಲ್ಲಿ ನಡೆದಿದೆ.

- Advertisement -

ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ನೆಹರು ನಗರದ ಬಳಿ ಶನಿವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು ನಿಸಾರ್ ಎಂಬುವವನು ಸುಲೈಮಾನ್ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ.

- Advertisement -

ಗಾಯಗೊಂಡ ಸುಲೈಮಾನ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp