ಬಂಟ್ವಾಳ: ಕಾರಿನೊಳಗೆ ಯುವಕನೋರ್ವ ಮೃತಪಟ್ಟಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ರಾತ್ರಿಯಾದರೂ ಈತ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಜಗದೀಶ್ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಕಾರಿನ ಕಿಟಕಿ, ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪಿದ್ದಾ ಅಥವಾ ಹೃದಯಾಘಾತದಿಂದ ಮೃತಪಟ್ಟಿದ್ದಾ ಎಂಬುದು ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ.