ಬಂಟ್ವಾಳ | ಎರಡು ತಂಡಗಳ ನಡುವೆ ಗಲಾಟೆ: ಮೂವರು ಯುವಕರಿಗೆ ಚೂರಿ ಇರಿತ

Prasthutha|

- Advertisement -

ಬಂಟ್ವಾಳ: ಎರಡು ತಂಡಗಳ ಮಧ್ಯೆ ಗಲಾಟೆ ನಡೆದು ಮೂವರು ಯುವಕರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ.

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ಮತ್ತು ಶಂಕರ್ ಚೂರಿ ಇರಿತಕ್ಕೊಳಗಾದವರು ಎಂದು ತಿಳಿದು ಬಂದಿದೆ.

- Advertisement -

ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಈ ಕೃತ್ಯ ಎಸಗಿದೆ ಎಂದು ಗಾಯಾಳುಗಳು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.