ಬಂಟ್ವಾಳ: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು

Prasthutha|

ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು (ಸೆ.24ರ ಭಾನುವಾರ) ಬೆಳಿಗ್ಗೆ ಪಾಣೆಮಂಗಳೂರಿನ ನೂತನ ಸೇತುವೆಯಲ್ಲಿ ನಡೆದಿದೆ.

- Advertisement -

ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಮೃತಪಟ್ಟವರು.

ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು,ಕೃಷಿ ಮಾಡಿಕೊಂಡಿದ್ದರು.

- Advertisement -

ವಾಮದಪದವಿನ ಮನೆಯಿಂದ ಸಜೀಪದಲ್ಲಿರುವ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಪವಿತ್ರ ಕನ್ಸ್ ಟ್ರಕ್ಷನ್ ಗೆ ಸೇರಿದ ಲಾರಿ ಢಿಕ್ಕಿಯಾಗಿದೆ.

ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp