ಬಂಟ್ವಾಳ | ಗುಡ್ಡ ಕುಸಿತದಿಂದ ಮೃತಪಟ್ಟ ಮಹಿಳೆಯ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಕುಟುಂಬಕ್ಕೆ ಸಾಂತ್ವನ

Prasthutha|

- Advertisement -

ಬಂಟ್ವಾಳ: ನಂದಾವರ ಗುಂಪು ಮನೆ ಎಂಬಲ್ಲಿ ಗುಡ್ಡ ಜರಿದು ಓರ್ವ ಮಹಿಳೆ ಮೃತಪಟ್ಟ ಘಟನೆ ನಡೆದ ಸ್ಥಳಕ್ಕೆ ಶನಿವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರಕಾರದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಾಗಿದ್ದು, ರಿಪೇರಿಗೆ ಕೂಡ ಪರಿಹಾರ ಕಲ್ಪಿಸುವ ಬಗ್ಗೆ ಭರವಸೆ ನೀಡಿದರು.

- Advertisement -

ಘಟನೆಯಲ್ಲಿ ಝರಿನಾ ಮೃತಪಟ್ಟಿದ್ದು, ಇವರ ಮಗಳು ಸಫಾ ಅವರು ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವಳ ಆಸ್ಪತ್ರೆಯ ಚಿಕಿತ್ಸೆ ಯ ಸಂಪೂರ್ಣ ವೆಚ್ಚವನ್ನು ಸರಕಾರದಿಂದ ಭರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಯವರಿಗೆ ಸೂಚನೆ ನೀಡಿದ್ದೇನೆ. ಘಟನೆ ನಡೆದ ಪ್ರದೇಶದಲ್ಲಿ ಇನ್ನೂ ಹಲವಾರು ಮನೆಗಳು ಅಪಾಯದಲ್ಲಿದ್ದು ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ ಎಂದರು.