ಗುಜರಾತ್ ಗಲಭೆ ಸಂತ್ರಸ್ತೆ ಬಿಲ್ಕಿಸ್ ಬಾನು ಪ್ರಕರಣದ ಎಲ್ಲಾ 11 ಅಪರಾಧಿಗಳು ಭಾನುವಾರ ರಾತ್ರಿ ಗೋಧ್ರಾ ಜೈಲಿನ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಜನವರಿ 8 ರಂದು ಸುಪ್ರೀಂ ಕೋರ್ಟ್ ಅವರ ಶಿಕ್ಷೆಯನ್ನು ರದ್ದುಗೊಳಿಸಿತ್ತು ಮತ್ತು ಜನವರಿ 21 ರೊಳಗೆ ಶರಣಾಗುವಂತೆ ಸೂಚಿಸಿತ್ತು.
ಆರೋಪಿಗಳು ಭಾನುವಾರ ತಡರಾತ್ರಿ ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಇನ್‌ಸ್ಪೆಕ್ಟರ್ ಎನ್‌ಎಲ್ ದೇಸಾಯಿ ತಿಳಿಸಿದ್ದಾರೆ. ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಯ ಅಪರಾಧಿಗಳು ಶರಣಾಗಲು ಹೆಚ್ಚಿನ ಸಮಯವನ್ನು ಕೋರಿದ್ದರು.
ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು ಮತ್ತು ಪೂರ್ವನಿರ್ಧರಿತ ದಿನಾಂಕದೊಳಗೆ ಶರಣಾಗುವಂತೆ ಕೇಳಿತ್ತು