ಬೆಂಗಳೂರು: ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಯು.ಬಿ. ಸಿ.ಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಹಲ್ಲೆ ಮಾಡಿದ ಪ್ರಕರಣದ ತಡೆಯಾಜ್ಞೆಯ ದಿನಾಂಕ ವಿಸ್ತರಣೆಯಾಗದ ಹಿನ್ನೆಲೆ ಪ್ರಕರಣದ ತನಿಖೆಯನ್ನು ಮುಂದುವರಿಸುವಂತೆ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಮೊಹಮ್ಮದ್ ನಲಪಾಡ್ ಫೆಬ್ರವರಿ 17, 2018 ರಂದು ಯುಬಿ ಸಿಟಿ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮೇಲೆ ಹಲ್ಲೆ ಮಾಡಿದ್ದಾರೆ.
ಬಳಿಕ ವಿದ್ವತ್ ರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅಲ್ಲಿಗೆ ತೆರಳಿದ ನಲಪಾಡ್ ಮತ್ತು ತಂಡ ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಇತರೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. 116 ದಿನಗಳ ಜೈಲುವಾಸದ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಮೊಹಮ್ಮದ್ ನಲಪಾಡ್ ಹೊರಬಂದಿದ್ದರು.