ಬೆಂಗಳೂರು: ದಕ್ಷ, ಜನಪರ ಆಡಳಿತ ಮಾಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಜಾನ್, ಹಿಜಾಬ್, ಹಲಾಲ್ ವಿಷಯಗಳನ್ನು ಸೌಹಾರ್ದ ಯುತವಾಗಿ, ಕಾನೂನಾತ್ಮಕವಾಗಿ ಬಗೆಹರಿಸಲಾಗಿದೆ. ನ್ಯಾಯ ಸಮ್ಮತವಾಗಿ ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯ ನೀಡಿರುವ ಆದೇಶದಂತೆ ಕ್ರಮ ವಹಿಸಿದೆ. ಅದರ ಚೌಕಟ್ಟಿನಲ್ಲಿ ದಕ್ಷವಾಗಿ ನಿಭಾಯಿಸಲು ಸಾಧ್ಯವಾಗಿದೆ ಎಂದರು.
ವರಿಷ್ಠರ ಸೂಚನೆ ಮೇರೆಗೆ ಸಂಪುಟ ವಿಸ್ತರಣೆ
ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ವಿಧಾನಪರಿಷತ್ತು ಮತ್ತು ರಾಜ್ಯಸಭಾ ಚುನಾವಣಾ ಸದ್ಯಕ್ಕೆ ಪ್ರಕ್ರಿಯೆ ಜಾರಿಯಲ್ಲಿದೆ. ನಿನ್ನೆ ಕೋರ್ ಕಮಿಟಿ ಸಭೆ ನಡೆದಿದೆ. ನಾಳೆ ನಾಡಿದ್ದು ವರಿಷ್ಠರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಲಾಗುವುದು. ಅವರ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪ್ರಾರಂಭವಾಗುವುದು.