ಬೆಂಗಳೂರು: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಅಧಿಕೃತವಾಗಿ ಬುಧವಾರ ಬಿಜೆಪಿ ಸೇರ್ಪಡೆಯಾದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಧ್ವಜ ಮತ್ತು ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಗೋವಿಂದ ವಿಲ. ಕಾರಜೋಳ, ಆರ್ ಅಶೋಕ್ ಸಹಿತ ಹಲವರು ಹೊರಟ್ಟಿ ಅವರನ್ನು ಅಭಿನಂದಿಸಿ ಸ್ವಾಗತಿಸಿದರು.
ಜೆಡಿಎಸ್ ಮೂಲಕ ವಿಧಾನ ಪರಿಷತ್ ಸಭಾಪತಿಯಾಗಿ ಕಳೆದ ಫೆಬ್ರವರಿಯಲ್ಲಿ ನೇಮಕ ಆಗಿದ್ದ ಬಸವರಾಜ ಹೊರಟ್ಟಿ ತಮ್ಮ ಸಾನಕ್ಕೆ ರಾಜೀನಾಮೆ ನೀಡಿದ್ದರು. ಮೇ 17ರಂದು ರಾಜೀನಾಮೆ ಅಂಗೀಕಾರ ಆಗುತ್ತಿದ್ದಂತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.