ಎಂಇಎಸ್ ಕಾರ್ಯಕರ್ತರನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಬಸವರಾಜ್ ಹೊರಟ್ಟಿಗೆ ಮನವಿ

Prasthutha|

ಬೆಳಗಾವಿ: ಎಂಇಎಸ್ ಸಂಘಟನೆಯನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು. ಕನ್ನಡ ಬಾವುಟ ಸುಟ್ಟು ಹಾಕಿದ ಎಂಇಎಸ್ ಪುಂಡರನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಸದಸ್ಯರು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ನಗರದಲ್ಲಿಂದು ಬಸವರಾಜ್ ಹೊರಟ್ಟಿ ಅವರ ಕಾರನ್ನು ನಿಲ್ಲಿಸಿದ ಹೋರಾಟಗಾರರು, ಬೆಳಗಾವಿಯಲ್ಲಿ ಶಿವಸೇನೆ, ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗುತ್ತಿದೆ. ಬೆಳಗಾವಿ ರಾಜ್ಯದ ಅವಿಭಾಜ್ಯ ಅಂಗವಾದರೂ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳು ನಾಡದ್ರೋಹಿ ಕೆಲಸ ಮಾಡುತ್ತಿವೆ ಎಂದು ಹೋರಾಟಗಾರರು ತಿಳಿಸಿದರು. ಈ ಸಂದರ್ಭದಲ್ಲಿ ಬಿ.ಹರೀಶ್ ಕುಮಾರ್ ಸೇರಿದಂತೆ ಪ್ರಮುಖರಿದ್ದರು.

Join Whatsapp