ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿ ಅವರು 8ನೇ ಬಾರಿ ಗೆಲುವು ಸಾಧಿಸಿದ್ದಾರೆ.
ಬಸವರಾಜ ಹೊರಟ್ಟಿ ಅವರಿಗೆ 7076 ಮತಗಳು ಸಿಕ್ಕಿದ್ದು, ಪ್ರತಿಸ್ಪರ್ಧಿ ಬಸವರಾಜ ಗುರಿಕಾರ ಅವರಿಗೆ 3314 ಮತಗಳು ದೊರೆತಿವೆ. ಈ ಮೂಲಕ ಬಸವರಾಜ ಹೊರಟ್ಟಿ ಅವರು ಗೆಲುವು ಸಾಧಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರಿಗೆ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಪರಿಷತ್ ಚುನಾವಣೆಯಲ್ಲಿ 8ನೇ ಬಾರಿ ಗೆಲುವು ಸಾಧಿಸಿದ ಬಸವರಾಜ ಹೊರಟ್ಟಿ
Prasthutha|