ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳ ಭರವಸೆ

Prasthutha|

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯ ವಿವಿಧ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭರವಸೆಯಿತ್ತರು.

- Advertisement -

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.ಮಾಧ್ಯಮ ಅಕಾಡೆಮಿ ಸ್ಥಾಪನೆಯಾಗಿ ನಲವತ್ತು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಕಾಡೆಮಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅನುದಾನದ ಅಗತ್ಯವಿದೆ ಎಂದು ನಿಯೋಗ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅನುದಾನ ಬಿಡುಗಡೆ ಮತ್ತು ಪತ್ರಕರ್ತರಿಗೆ ಪ್ರಶಸ್ತಿ ನೀಡಲು ದಿನಾಂಕ ನಿಗದಿಪಡಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ:ಪಿ.ಎಸ್.ಹರ್ಷ ಅವರಿಗೆ ಸೂಚಿಸಿದರು.

ಪ್ರೆಸ್ ಕ್ಲಬ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳದ ಕುರಿತಂತೆ ವ್ಯಾಜ್ಯವನ್ನು ಇತ್ಯರ್ಥಗೊಳಿಸಲು ಬೆಂಗಳೂರು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಮಾಹಿತಿ ನೀಡುವಂತೆ ಸೂಚಿಸಿದರು.

- Advertisement -

ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಅಕಾಡೆಮಿ ಸದಸ್ಯ ಶಿವಾನಂದ್ ತಗಡೂರು, ಅಕಾಡೆಮಿ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Join Whatsapp