Home ಟಾಪ್ ಸುದ್ದಿಗಳು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು, ಜು.28: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.


ಬೆಳಗ್ಗೆ 11 ಗಂಟೆಗೆ ಸರಿಯಾಗಿ ರಾಜಭವನದ ಗಾಜಿನ ಮನೆಯಲ್ಲಿ ರಾಷ್ಟ್ರಗೀತೆಯೊಂದಿಗೆ ಪ್ರಾರಂಭಗೊಂಡ ಸಮಾರಂಭ ಐದು ನಿಮಿಷಗಳಲ್ಲೇ ಮುಕ್ತಾಯಗೊಂಡಿತು. ಇಂದಿನ ಸಮಾರಂಭದಲ್ಲಿ ಬೊಮ್ಮಾಯಿ ಒಬ್ಬರೇ ಪ್ರತಿಜ್ಞೆ ಸ್ವೀಕರಿಸಿದರು. ಸಚಿವ ಸಂಪುಟವನ್ನು ಎರಡು ಮೂರು ದಿನಗಳಲ್ಲಿ ರಚಿಸುವ ಸಾಧ್ಯತೆ ಇದೆ. ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.


ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖಂಡರಾದ ಸಿ.ಟಿ.ರವಿ, ಜಗದೀಶ್ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.


ಸಮಾರಂಭದಲ್ಲಿ ಬೊಮ್ಮಾಯಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು, ಶಿಗ್ಗಾಂವ್ ಕ್ಷೇತ್ರದ ಮತದಾರರು, ಬಿಜೆಪಿ ಕಾರ್ಯಕರ್ತರು, ಮುಖಂಡರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Join Whatsapp
Exit mobile version