ಉತ್ತರ ಪ್ರದೇಶದಲ್ಲಿ ಮುಸ್ಲಿಮ್ ಮತ ವಿಭಜಿಸಬೇಡಿ: ಉವೈಸಿಗೆ ಮೌಲಾನಾ ಸಜ್ಜಾದ್ ನೂಮಾನಿ ಮನವಿ

Prasthutha|

ಲಕ್ನೋ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಸ್ಲಿಮ್ ಮತಗಳನ್ನು ವಿಭಜಿಸದಂತೆ ಆಲ್ ಇಂಡಿಯಾ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ (AIMPLB) ಹಿರಿಯ ಸದಸ್ಯ ಮೌಲಾನಾ ಖಲೀಲುರ್ರಹ್ಮಾನ್ ಸಜ್ಜಾದ್ ನೂಮಾನಿ ಅವರು ಸಂಸದ, ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿಗೆ ಪತ್ರ ಬರೆದಿದ್ದಾರೆ.

- Advertisement -

ತಮ್ಮ ಪಕ್ಷ ಗೆಲ್ಲುವ ಕಡೆಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಉವೈಸಿಗೆ ನೂಮಾನಿ ಒತ್ತಾಯಿಸಿದ್ದಾರೆ.

ಮೌಲಾನಾ ಅವರು ಖ್ಯಾತ ವಿದ್ವಾಂಸರಾಗಿದ್ದಾರೆ. ಮಾತ್ರವಲ್ಲ ಅವರು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯಕಾರಿಣಿ ಸಮಿತಿಯ ಸದಸ್ಯರು ಕೂಡ ಆಗಿದ್ದಾರೆ.

- Advertisement -

ಎಐಎಂಐಎಂ ಪ್ರಸಕ್ತ ಉತ್ತರ ಪ್ರದೇಶ ಚುನಾವಣೆಯಲ್ಲಿ 100 ಸ್ಥಾನಗಳಲ್ಲಿ ಸ್ಪರ್ಧೆ ನಡೆಸುವುದಾಗಿ ಸಂಸದ ಉವೈಸಿ ಈಗಾಗಲೇ ಘೋಷಿಸಿದ್ದಾರೆ.

Join Whatsapp