ಬಿಬಿಸಿ ಸಾಕ್ಷ್ಯಚಿತ್ರ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

Prasthutha|

ನವದೆಹಲಿ: ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನಿರ್ಬಂಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

- Advertisement -

ಈ ಸಂಬಂಧ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮೂರು ವಾರಗಳಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ ನಲ್ಲಿ ನಡೆಯಲಿದೆ.

2002ರ ಗುಜರಾತ್ ಗಲಭೆ ಕುರಿತು ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿತ್ತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಕೀಲ ಎಂ ಎಲ್ ಶರ್ಮಾ ಮತ್ತು ಹಿರಿಯ ವಕೀಲ ಸಿಯು ಸಿಂಗ್ ಅವರು ಈ ವಿಷಯದ ಕುರಿತು ತಮ್ಮ ಪ್ರತ್ಯೇಕ ಪಿಐಎಲ್‌ಗಳನ್ನು ತುರ್ತು ಪಟ್ಟಿ ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಗಳನ್ನು ಗಣನೆಗೆ ತೆಗೆದುಕೊಂಡಿತು.

- Advertisement -

ಫೆಬ್ರವರಿ 6 ರಂದು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿತ್ತು. ಆದರೆ, ಈ ಪ್ರಕರಣ ವಿಚಾರಣೆ ಇಂದು ಮುಕ್ತಾಯವಾಗಿದ್ದು, ಸುಪ್ರೀಂ ಕೆಲವೊಂದು ದಾಖಲೆಗಳನ್ನು ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ. 

Join Whatsapp