ಬೆಂಗಳೂರು: ಬೃಹತ್ ಬೆಂಗಳೂರು ಹೋಟೆಲುಗಳ ಸಂಘದ ವತಿಯಿಂದ ಜಿ.ಆರ್ .ಬಿ. ಬಿಬಿಹೆಚ್ಎ ಪುಡ್ 2022 ಆವಾರ್ಡ್ ಕಾರ್ಯಕ್ರಮವನ್ನು ಇದೇ 20ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
BBHA ವಾರ್ಷಿಕ ಸಮಾರಂಭದಲ್ಲಿ ಹೋಟೆಲ್ ಉದ್ಯಮದಲ್ಲಿ ತಮ್ಮ ಪ್ರಯತ್ನದಿಂದ ವಿಶೇಷವಾದ ಪಾರಂಪರ್ಯ ಹಾಗೂ ಅತ್ಯುತ್ತಮ ಸೇವೆಯನ್ನು ನೀಡುತ್ತಿರುವವರನ್ನು ಗುರುತಿಸುವ ಉದ್ದೇಶದಿಂದ ಈ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಶಿ, ಬೆಂಗಳೂರು ಪೋಲಿಸ್ ಆಯುಕ್ತ ಪ್ರತಾಪ ರೆಡ್ಡಿ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಒಂದು ಸಾವಿರದ ಐದನೂರಕ್ಕೂ ಅಧಿಕ ಹೋಟೆಲ್ ಮಾಲೀಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಒಂದೇ ವೇದಿಕೆಯನ್ನು ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ದೆ ನಡೆಸಲಾಗುತ್ತದೆ. ಈ ಸ್ಪರ್ದೆ ಬೆಂಗಳೂರಿನ ದಿ ಚಾನ್ಸರಿ ಪೆವಿಲಿಯನ್ ಹೋಟೆಲ್ ನಲ್ಲಿ ನಡೆಯಲಿದ್ದು ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಹೋಟೆಲ್, ರೆಸ್ಟೋರೆಂಟ್, ಬೇಕರಿಯವರು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮದ ಅಧ್ಯಕ್ಷ ಎಸ್.ಅರುಣ್ ಕುಮಾರ್ ತಿಳಿಸಿದರು.