ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 16, 2024 (ಶನಿವಾರ)ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಿ ಎಲ್ಲಿಯೂ ಉಲ್ಲಂಘನೆಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ.