Home ಟಾಪ್ ಸುದ್ದಿಗಳು ಬಿಬಿಎಂಪಿ ಚುನಾವಣೆ ಡಿಸೆಂಬರ್ ವೇಳೆಗೆ ನಡೆಯಲಿದೆ: ರಾಮಲಿಂಗಾರೆಡ್ಡಿ

ಬಿಬಿಎಂಪಿ ಚುನಾವಣೆ ಡಿಸೆಂಬರ್ ವೇಳೆಗೆ ನಡೆಯಲಿದೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಬಿಎಂಪಿ ಚುನಾವಣೆಯ ಡಿಸೆಂಬರ್ ವೇಳೆಗೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.


ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ ಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. ಅಲ್ಲದೆ, ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಚಿವರ ದೆಹಲಿ ಭೇಟಿಯ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ೨೦ ಸ್ಥಾನ ಗೆಲ್ಲುವ ಗುರಿ ನೀಡಲಾಗಿದೆ. ಆದಷ್ಟು ಬೇಗ ಅಭ್ಯರ್ಥಿ ಘೋಷಣೆ ಮಾಡುವಂತೆ ಮನವಿ ಮಾಡಲಾಗಿದ್ದು, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ, ಕಾರ್ಯಾಧ್ಯಕ್ಷ, ಬ್ಲಾಕ್ ಅಧ್ಯಕ್ಷ ,ಜಿಲ್ಲಾಧ್ಯಕ್ಷರ ನೇಮಕಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

Join Whatsapp
Exit mobile version