Home ಟಾಪ್ ಸುದ್ದಿಗಳು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ರಾಮಲಿಂಗರೆಡ್ಡಿ

ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ರಾಮಲಿಂಗರೆಡ್ಡಿ

ಬೆಂಗಳೂರು: ಎರಡು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಮಾಡುತ್ತೇವೆ ಎಂದು ಸಚಿವ ರಾಮಲಿಂಗರೆಡ್ಡಿ ಸುಳಿವು ನೀಡಿದ್ದಾರೆ.


ನೂತನ ಮುಖ್ಯಮಂತ್ರಿಯಾಗಿ ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ 8 ಮಂದಿ ಶಾಸಕರೂ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿರಿಯ ನಾಯಕರಾದ ರಾಮಲಿಂಗರೆಡ್ಡಿಯವರಿಗೆ ಸಚಿವ ಸ್ಥಾನ ಸಿಕ್ಕಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

Join Whatsapp
Exit mobile version