►ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್ ದೂರು ದಾಖಲಿಸಿದ್ದಾರೆ.
ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟ ಗಾಯಗಳಾಗಿವೆ. ಈ ಘಟನೆ ಸಂಬಂಧ ಮೂರು ಆಯಾಮಗಳಲ್ಲಿ ತನಿಖೆ ನಡೆಸುವಂತೆ ಸಿಎಂ, ಡಿಸಿಎಂ ಸೂಚನೆ ನೀಡಿದ್ದಾರೆ.