Home ಟಾಪ್ ಸುದ್ದಿಗಳು ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದೆ.

ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.


ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಆರ್ ಆರ್ ನಗರ ವಲಯ ಸಹಾಯಕ ಕಂದಾಯ ಅಧಿಕಾರಿ ಕೆ ಜಯಣ್ಣಗೆ ನೋಟೀಸ್ ಜಾರಿ ಮಾಡಿದ್ದಾರೆ. 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

Join Whatsapp
Exit mobile version