ಚಿಲುಮೆ  ಸಂಸ್ಥೆ ಕಪ್ಪು ಪಟ್ಟಿಗೆ: ಬಿಬಿಎಂಪಿ ಆದೇಶ

Prasthutha|

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

- Advertisement -

28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್ ಎ(ವೋಟರ್ ಹೆಲ್ಪ್ ಲೈನ್ ಆ್ಯಪ್) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು.

ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಬಿಬಿಎಂಪಿ ನೀಡಿದ್ದ ಅನುಮತಿಯನ್ನು  ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಚಿಲುಮೆ ಸಂಸ್ಥೆಯನ್ನು  ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ಧ ತನಿಖೆ ನಡೆಸುತ್ತಿದ್ದು, ಈ ಸಂಸ್ಥೆಯಾಗಲೀ, ಸಂಸ್ಥೆಯ ನಿರ್ದೇಶಕರು ಅಥವಾ ಅವರ ಸಹಭಾಗಿತ್ವದಲ್ಲಿ ನಡೆಸಲಾಗುವ ಯಾವುದೇ ಸಂಸ್ಥೆಯು ಪಾಲಿಕೆಯ ಸೇವೆ ಮತ್ತು ಸಂಗ್ರಹಣೆಯ ಟೆಂಡರ್ ಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

Join Whatsapp