ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ರಾಜಧಾನಿ ಬೆಂಗಳೂರು ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ನಂತರ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ‘ದಂಡ’ ಹಾಕುವ ಬಗ್ಗೆಯೂ ಚಿಂತಿಸುತ್ತಿದೆ ಎಂದು ತಿಳಿದು ಬಂದಿದೆ.
ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿದಿನ 17,000 ಪರೀಕ್ಷೆಗಳನ್ನು ಮಾಡಲಾಗುತ್ತದೆ.ಅದರಲ್ಲಿ 600 ರಿಂದ 700 ಪ್ರಕರಣಗಳು ಪತ್ತೆಯಾಗುತ್ತಿವೆ. ಗಂಭೀರ ಪರಿಸ್ಥಿತಿ ಇಲ್ಲದಿರುವುದರಿಂದ ಮನೆಯಲ್ಲೇ ಐಸೋಲೇಷನ್ ಆಗುತ್ತಿದ್ದು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಕಡ್ಡಾಯ ಮಾಸ್ಕ್ ನಿಯಮವನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸದಿರುವುದು ಕಂಡುಬಂದಿರುವುದರಿಂದ ದಂಡ ಹಾಕುವಂತೆ ತಾಂತ್ರಿಕ ಸಲಹಾ ಸಮಿತಿಯು ಸೂಚಿಸಿದ್ದು ಮಹದೇವಪುರ ವಲಯದಲ್ಲಿ ಪ್ರಕರಣಗಳು ಹೆಚ್ಚಿರುವುದರಿಂದ ಲಸಿಕೆ ಮತ್ತು ಬೂಸ್ಟರ್ ಡೋಸ್ ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆಯುಕ್ತರು ಹೇಳಿದರು.