Home ಟಾಪ್ ಸುದ್ದಿಗಳು ಕದ್ದುಮುಚ್ಚಿ ರಾತ್ರೋರಾತ್ರಿ ಬಜೆಟ್ ಮಂಡಿಸಿದ BBMP !

ಕದ್ದುಮುಚ್ಚಿ ರಾತ್ರೋರಾತ್ರಿ ಬಜೆಟ್ ಮಂಡಿಸಿದ BBMP !

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾತ್ರೋರಾತ್ರಿ ಬಜೆಟ್ ಮಂಡನೆ ಮಾಡಿದೆ. ಯಾರಿಗೂ ಮಾಹಿತಿ ನೀಡದೆ ಕದ್ದುಮುಚ್ಚಿ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗಿದೆ.

2021-22ರ ಆರ್ಥಿಕ ವರ್ಷದ ಕೊನೆಯ ದಿನವಾದ ಮಾರ್ಚ್ 31ಕ್ಕೆ ಕೇವಲ ಒಂದು ಗಂಟೆ ಮೊದಲು ಬಿಬಿಎಂಪಿ ತನ್ನ ವಾರ್ಷಿಕ ಬಜೆಟ್ ಅನ್ನು ಬಿಡುಗಡೆ ಮಾಡಿದೆ. ಬಿಬಿಎಂಪಿ ಕಾಯ್ದೆಯ ಸೆಕ್ಷನ್ 196 ರ ಪ್ರಕಾರ, ಮುಂದಿನ ಹಣಕಾಸು ವರ್ಷ ಪ್ರಾರಂಭವಾಗುವ ಕನಿಷ್ಠ ಮೂರು ವಾರಗಳ ಮೊದಲು ಸ್ಥಳೀಯ ಸಂಸ್ಥೆಯ ಬಜೆಟ್ ಅನ್ನು ಘೋಷಿಸಬೇಕು. ಅದರಂತೆ ಮಾರ್ಚ್ 10ರೊಳಗೆ ಬಜೆಟ್ ಮಂಡಿಸಬೇಕಿತ್ತು.10,480 ಕೋಟಿ ಮೊತ್ತದ ಬಜೆಟ್ ಇದಾಗಿದ್ದು, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ಕೌನ್ಸಿಲ್ ಶಿಷ್ಟಾಚಾರ ಮೀರಿ ಈ ಬಾರಿ ಬಜೆಟ್ ಮಂಡಿಸಲಾಗಿದೆ.

ತಡರಾತ್ರಿ 11.24ಕ್ಕೆ ಆಯ್ಯವ್ಯಯ ಮಂಡನೆ ಆಗಿರುವ ಬಗ್ಗೆ ಪಾಲಿಕೆ ಮಾಹಿತಿ ನೀಡಿದ್ದು ಬಜೆಟ್ ಮಂಡನೆ ವಿಚಾರದಲ್ಲಿ ಜನಪ್ರತಿನಿಧಿಗಳ, ಸಚಿವರ ಅಭಿಪ್ರಾಯ ಸಂಗ್ರಹಿಸಲು ಪಾಲಿಕೆ ಸೋತಿದೆ. ಸದ್ಯ ತರಾತುರಿಯಲ್ಲಿ ಹಲವು ಬಜೆಟ್ ಯೋಜನೆಗಳ ಸೇರ್ಪಡೆಗೊಳಿಸಿ ಬಜೆಟ್ ಮಂಡನೆ ಮಾಡಲಾಗಿದೆ ಎನ್ನಲಾಗಿದೆ.

Join Whatsapp
Exit mobile version