ಬಿಬಿಎಂಪಿಯ 200 ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ!

Prasthutha|

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಸುಮಾರು 200 ಪೌರಕಾರ್ಮಿಕರು ಸಿಂಗಾಪುರ ಪ್ರವಾಸಕ್ಕೆ ತೆರಳಲಿದ್ದಾರೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ (KSSKDC) ಮೂಲಕ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಪ್ರವಾಸಕ್ಕೆ ಬಿಬಿಎಂಪಿ ಅಧಿಕಾರಿಗಳು 200 ಪೌರಕಾರ್ಮಿಕರನ್ನು ಆಯ್ಕೆ ಮಾಡಿದ್ದಾರೆ.

- Advertisement -

ಪ್ರವಾಸಕ್ಕೆ ಆಯ್ಕೆಯಾದ ಕರ್ನಾಟಕದ 300 ಜನರಲ್ಲಿ 200 ಬಿಬಿಎಂಪಿ ಪೌರಕಾರ್ಮಿಕರು ಸೇರಿದ್ದಾರೆ ಎಂದು ಕೆಎಸ್ಎಸ್​ಕೆಡಿಸಿ ಎಂಡಿ ಕೆ.ಬಿ.ಮಲ್ಲಿಕಾರ್ಜುನ ಅವರು ಹೇಳಿದ್ದಾರೆ.

ಉಳಿದ 100 ಪೌರಕಾರ್ಮಿಕರು ಬೆಳಗಾವಿ, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಮಹಾನಗರ ಪಾಲಿಕೆಗಳಿಗೆ ಸೇರಿದವರಾಗಿದ್ದಾರೆ.

- Advertisement -

ಸಿಂಗಾಪುರಕ್ಕೆ ಪ್ರವಾಸ ಕೈಗೊಳ್ಳುತ್ತಿರುವ ಕರ್ನಾಟಕದ ಎಲ್ಲಾ ಪೌರಕಾರ್ಮಿಕರು ಸಿಂಗಾಪುರದಲ್ಲಿ ಅಳವಡಿಸಿಕೊಂಡಿರುವ ಘನತ್ಯಾಜ್ಯ ನಿರ್ವಹಣೆ ಮತ್ತು ಒಳಚರಂಡಿ ಸಂಸ್ಕರಣಾ ಕಾರ್ಯವಿಧಾನಗಳನ್ನು ಅಧ್ಯಯನ ನಡೆಸಲಿದ್ದಾರೆ.

Join Whatsapp