Home ಟಾಪ್ ಸುದ್ದಿಗಳು ಶಾಲೆಗಳಲ್ಲಿ ಮೊಟ್ಟೆ ತಿನ್ನಲು ಮಕ್ಕಳ ಮೇಲೆ ಒತ್ತಡ ಹೇರಿಲ್ಲ: ಬಿ.ಸಿ. ನಾಗೇಶ್

ಶಾಲೆಗಳಲ್ಲಿ ಮೊಟ್ಟೆ ತಿನ್ನಲು ಮಕ್ಕಳ ಮೇಲೆ ಒತ್ತಡ ಹೇರಿಲ್ಲ: ಬಿ.ಸಿ. ನಾಗೇಶ್

ಮಂಡ್ಯ: ಶಾಲೆಗಳಲ್ಲಿ ಮೊಟ್ಟೆ ತಿನ್ನಲು ಮಕ್ಕಳ ಮೇಲೆ ಒತ್ತಡ ಹೇರಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲೆಗಳಲ್ಲಿ ಮೊಟ್ಟೆ ತಿನ್ನಲು ಮಕ್ಕಳ ಮೇಲೆ ಒತ್ತಡ ಹೇರಿಲ್ಲ, ತಜ್ಞರ ಸಲಹೆ ಮೇರೆಗೆ ಮಕ್ಕಳನ್ನು ಕಾಡುತ್ತಿರುವ ಅಪೌಷ್ಟಿಕತೆ ಹೋಗಲಾಡಿಸಲು ಮೊಟ್ಟೆ ವಿತರಣೆ ಮಾಡಲಾಗುತ್ತಿದೆ’ ಎಂದು ಹೇಳಿದರು.
‘ಮೊಟ್ಟೆ ಜೊತೆಗೆ ಬಾಳೆಹಣ್ಣು ಕೂಡ ವಿತರಣೆ ಮಾಡಲಾಗುತ್ತಿದೆ, ಯಾವುದೇ ಪದಾರ್ಥ ಸೇವನೆಗೆ ಒತ್ತಡ ಇಲ್ಲ. ರಾಜ್ಯದ ವಿವಿಧೆಡೆ ಮಕ್ಕಳು ಅಪೌಷ್ಟಕತೆಯಿಂದ ಬಳಲುತ್ತಿದ್ದಾರೆ ಎಂಬ ವರದಿ ಕೇಂದ್ರ ಸರ್ಕಾರದಿಂದ ಬಂದಿದೆ. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಳ ಮಾಡುವ ಅವಶ್ಯಕತೆ ಇದೆ’ ಎಂದರು.

‘ಮೊಟ್ಟೆ, ಬಾಳೆಹಣ್ಣಿನ ಜೊತೆಗೆ ಇತರ ಪೌಷ್ಟಿಕಾಂಶವುಳ್ಳ ಪದಾರ್ಥಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಿಗೆ ತಜ್ಞರು ಒಪ್ಪಿಗೆ ನೀಡಿದರೆ ಮುಂದಿನ ದಿನಗಳಲ್ಲಿ ಅದನ್ನೂ ಜಾರಿಗೊಳಿಸಲಾಗುವುದು. ಮಕ್ಕಳ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ’ ಎಂದು ಸಚಿವರು ತಿಳಿಸಿದ್ದಾರೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp
Exit mobile version