ಬಿಸಿ ರೋಡ್ | ಕಾರು ಅಪಘಾತ: ಪತ್ನಿ ಸಾವು, ಪತಿ ಗಂಭೀರ

Prasthutha|

ಬಂಟ್ವಾಳ: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಪತ್ನಿ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.

- Advertisement -


ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವ ವಿವಾಹಿತೆ.


ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

- Advertisement -


ಬಿಸಿ ರೋಡಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.



Join Whatsapp