ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ BCCI

- Advertisement -

ಮುಂಬೈ ಇಂಡಿಯನ್ಸ್ ತಂಡದ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಮರೀಚಿಕೆಯಾಗಿದ್ದ ಗೆಲುವನ್ನು ಮರಳಿ ಪಡೆಯುವಲ್ಲಿ ಆರ್​ ಸಿಬಿ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

- Advertisement -

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಈ ಬಾರಿಯ ಐಪಿಎಲ್ ​ನಲ್ಲಿ ದಂಡದ ಶಿಕ್ದೆಗೆ ಗುರಿಯಾಗುತ್ತಿರುವ ನಾಲ್ಕನೇ ನಾಯಕ ರಜತ್ ಪಾಟಿದಾರ್.

ಇದಕ್ಕೂ ಮುನ್ನ….ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ. ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

- Advertisement -


Must Read

Related Articles