Home ಕ್ರೀಡೆ ಟಿ-20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ

ಟಿ-20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ಜೂನ್ 1 ರಿಂದ 29 ರವರೆಗೆ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟಿ-20 ವಿಶ್ವಕಪ್ ನಡೆಯಲಿದ್ದು, ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ರೋಹಿತ್ ಶರ್ಮಾ ತಂಡದ ನಾಯಕ ಹಾಗೂ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಏಕದಿನ ವಿಶ್ವಕಪ್ ನಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದ ಕನ್ನಡಿಗ ಕೆ. ಎಲ್ ರಾಹುಲ್ ಟಿ-20 ವಿಶ್ವಕಪ್ ನಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.

ತಂಡ ಹೀಗಿದೆ: ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ ಸನ್ ಶಿವಂ ದುಬೆ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ ದೀಪ್ ಯಾದವ್, ಯಜುವೆಂದ್ರ ಚಹಲ್, ಜಸ್ಪ್ರಿತ್ ಬೂಮ್ರಾ, ಹರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.‌

Join Whatsapp
Exit mobile version