ಉದ್ಯೋಗ ಸಿಗದೇ ನೊಂದ ಬಿಕಾಂ ಪದವೀಧರ ಆತ್ಮಹತ್ಯೆ

Prasthutha|

ಬೆಂಗಳೂರು: ಸರಿಯಾದ ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಯಗವದೇವಪಲ್ಲಿಯಲ್ಲಿ ನಡೆದಿದೆ.

- Advertisement -

ಯಗವದೇವಪಲ್ಲಿಯ ಶ್ರೀಕಾಂತ್ (30) ನೇಣಿಗೆ ಶರಣಾದ ಯುವಕನಾಗಿದ್ದಾನೆ.

ಮೃತ ಶ್ರೀಕಾಂತ್ ಬಿ.ಕಾಂ ವ್ಯಾಸಂಗ ಮಾಡಿದ್ದು, ಕೋವಿಡ್ ನಂತರ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾನೆ. ಆದರೆ, ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗದ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.

- Advertisement -

ಕಳೆದ ದಿನ ಮನೆಯಿಂದ ಹೊರಟು ಎಲ್ಲಿಗೋ ಹೋಗಿ ಬರುವುದಾಗಿ ಹೇಳಿದ್ದ ಶ್ರೀಕಾಂತ್, ಊರು ಪಕ್ಕದ ಹುಣಸೇ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಕರಣ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Join Whatsapp