ಮೀಸಲಾತಿ  ಕುರಿತ ಹೇಳಿಕೆ ನೀಡುವಾಗ  ಜಾಗರೂಕರಾಗಿರಿ: ಕಾಂಗ್ರೆಸ್ ವರಿಷ್ಠರ ಸೂಚನೆ

Prasthutha|

ಬೆಂಗಳೂರು: ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಕುರಿತ ಹೇಳಿಕೆ ನೀಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕೆಂದು ಕರ್ನಾಟಕದ ನಾಯಕರಿಗೆ ಕಾಂಗ್ರೆಸ್ ವರಿಷ್ಠರು ಸೂಚನೆ ನೀಡಿದ್ದಾರೆ.

- Advertisement -

ಚುನಾವಣೆಗೆ ಮುನ್ನ ರಾಜ್ಯದಲ್ಲಿ ಕೇಳಿ ಬರುತ್ತಿರುವ ಪಂಚಮಸಾಲಿ ಲಿಂಗಾಯತ, ಒಕ್ಕಲಿಗರು, ಕುರುಬರು  ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಕುರಿತು ಪ್ರತಿಕ್ರಿಯಿಸುವಾಗ ಜಾಗರೂಕರಾಗಿರಿ ಎಂದು  ವರಿಷ್ಠರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.

2018ರ ಮಾರ್ಚ್‌ನಲ್ಲಿ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಟ್ಯಾಗ್ ನೀಡುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಪಕ್ಷದ  ಸೋಲಿಗೆ ಒಂದು ಪ್ರಮುಖ ಕಾರಣ ಎಂದು ಕಾಂಗ್ರೆಸ್ ಬಲವಾಗಿ ನಂಬಿದೆ.

- Advertisement -

ಈ ಹಿನ್ನೆಲೆಯಲ್ಲಿ ಈ ಬಾರಿ ಪಕ್ಷವು ಮೀಸಲಾತಿಯಂತಹ ಸೂಕ್ಷ್ಮ ವಿಷಯಗಳನ್ನು ಎತ್ತಿಕೊಂಡು ಮಾಡಿದ ತಪ್ಪನ್ನು ಪುನರಾವರ್ತಿಸಲು ಬಯಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಅಲ್ಲದೆ, ಭ್ರಷ್ಟಾಚಾರ, ಶೇ 40 ಕಮಿಷನ್ ಆರೋಪ, ನೇಮಕಾತಿ ಹಗರಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ದುರಾಡಳಿತ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಕೊಂಡು ರಾಜ್ಯ ನಾಯಕರು ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಇದನ್ನು ಮುಂದುವರಿಸುವಂತೆ ವರಿಷ್ಠರು ತಾಕೀತು ಮಾಡಿದ್ದಾರೆ.

Join Whatsapp