ವಿಜಯಪುರ: ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಸವರ್ಣಿಯರು !

Prasthutha|

ವಿಜಯಪುರ: ಸವರ್ಣಿಯರ ಗೊಂಪೊಂದು 12 ವರ್ಷದ ಬಾಲಕನೊಬ್ಬನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಸಮೀಪದ ವಡವಡಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಅಶ್ಲೀಲವಾಗಿ ಬೈದಿದ್ದಾನೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಬೆತ್ತಲೆಗೊಳಿಸಿ ಹಲ್ಲೆ ನಡೆಸುತ್ತಿರುವ ವೀಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾ.18ರಂದು ನಡೆದಿದೆ ಎಂದು ತಿಳಿದು ಬಂದಿದೆ. 

ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp