ಬೆಂಗಳೂರು: ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆ ವಿರುದ್ಧ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಸೇರಿದಂತೆ ಹಲವರು ಕೊಲೆ ಯತ್ನ ಆರೋಪದಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಚಿವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗವು ಗೋಕುಲ್ ರೋಡ್ ಠಾಣೆಯಲ್ಲಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲಿಸಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.