ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

Prasthutha|

- Advertisement -

ಗುವಾಹಟಿ: ನಾನು ಗೋಮಾಂಸ ತಿನ್ನುತ್ತೇನೆ. ಆದರೂ ಬಿಜೆಪಿಯಲ್ಲಿದ್ದೇನೆ. ಇದರಿಂದ ಯಾವುದೇ ಸಮಸ್ಯೆಯೂ ಕಾಣಿಸುತ್ತಿಲ್ಲ ಎಂದು ಮೇಘಾಲಯದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾದ್ರಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ಯಾವುದೇ ಚರ್ಚ್ ದಾಳಿಗೆ ಒಳಗಾಗಿರುವುದನ್ನು ನಾವು ನೋಡಿಲ್ಲ. ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧವಿಲ್ಲ. ನಾನು ಗೋಮಾಂಸ ತಿನ್ನುತ್ತೇನೆ. ನಾನು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿದ್ದನ್ನು ನಾನು ಕಂಡಿಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ. ಅದನ್ನು ಮಾರ್ಚ್ 2 ರಂದು ಎಲ್ಲರೂ ನೋಡಲಿದ್ದಾರೆ’ ಎಂದು ತಿಳಿಸಿದ್ದಾರೆ.

Join Whatsapp