ಭಕ್ತರಿಗೆ ಶಾಕ್: ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಗೋಮಾಂಸದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ..!

Prasthutha|

- Advertisement -

ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.
ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.

- Advertisement -

ಲ್ಯಾಬ್‌ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ. ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.

ತಿರುಪತಿ ಲಡ್ಡುವನ್ನು ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿತರಿಸಲಾಗುತ್ತದೆ. ಈ ದೇವಸ್ಥಾನವನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ನಡೆಸುತ್ತದೆ. ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ಪ್ರಸಾದವಾಗಿ ವಿತರಿಸಲು ಗೋಮಾಂಸ ಟ್ಯಾಲೋ, ಮೀನಿನ ಎಣ್ಣೆ ಮತ್ತು ಪಾಮ್ ಆಯಿಲ್ ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷೆಯ ವರದಿ ಬಹಿರಂಗಪಡಿಸಿದೆ.



Join Whatsapp
Exit mobile version