Home ಟಾಪ್ ಸುದ್ದಿಗಳು ದಸರಾ ನಂತರ 1 ರಿಂದ 5 ನೇ ತರಗತಿಗಳು ಆರಂಭ: ಶಿಕ್ಷಣ ಸಚಿವರು ಹೇಳಿದ್ದೇನು?

ದಸರಾ ನಂತರ 1 ರಿಂದ 5 ನೇ ತರಗತಿಗಳು ಆರಂಭ: ಶಿಕ್ಷಣ ಸಚಿವರು ಹೇಳಿದ್ದೇನು?

ಬೆಂಗಳೂರು: ದಸರಾ ನಂತರ 1 ರಿಂದ 5 ತರಗತಿಗಳು ಆರಂಭ ಆಗುವ ಸುಳಿವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೀಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವು ಆಗಿದೆ. ಸಾಂಕ್ರಾಮಿಕ ರೋಗದ ಭಯದಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು ಎಂಬ ಒಂದೇ ಕಾರಣಕ್ಕೆ ಹಿಂದೇಟು ಹಾಕಲಾಗುತ್ತಿತ್ತು. ಆದರೀಗ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಇಲಾಖೆ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ. ಈ ಬಗ್ಗೆ ತಜ್ಞರ ಜೊತೆ ಸಭೆ ನಡೆಸಿ ಅವರ ಅಭಿಪ್ರಾಯವನ್ನೂ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಕೋವಿಡ್ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇದೆ. ಆದರೀಗ ಕೋವಿಡ್ ಆತಂಕ ಕಡಿಮೆ ಆಗಿದೆ. ಆದರೆ, ಡೆಂಗ್ಯೂ ಹಾಗೂ ವೈರಲ್ ಜ್ವರ ಮಕ್ಕಳನ್ನು ಬಾಧಿಸುತ್ತಿದೆ. ಹೀಗಾಗಿ ದಸರಾ ವೇಳೆಗೆ ಈ ಸಾಂಕ್ರಾಮಿಕ ರೋಗಗಳು ನಿಯಂತ್ರಣಕ್ಕೆ ಬಂದರೆ ಶಾಲೆಗಳನ್ನು ಪುನರಾರಂಭಿಸಲಾಗುವುದು. ಆಗ ಪೋಷಕರೂ ಸಹ ತಮ್ಮ ಮಕ್ಕಳನ್ನು ನಿರಾಂತಕವಾಗಿ ಶಾಲೆಗಳಿಗೆ ಕಳುಹಿಸಬಹುದು ಎಂದು ಹೇಳಿದರು.

Join Whatsapp
Exit mobile version