ಚೀನಾ ಅತಿಕ್ರಮಣವನ್ನು ಪ್ರಶ್ನಿಸಲು ‘ಬೀಜಿಂಗ್ ಜನತಾ ಪಾರ್ಟಿ’ ಹಿಂಜರಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Prasthutha: December 31, 2021

ಹೊಸದಿಲ್ಲಿ: ಚೀನಾ ಅತಿಕ್ರಮಣವನ್ನು ಪ್ರಶ್ನಿಸಲು ‘ಬೀಜಿಂಗ್ ಜನತಾ ಪಾರ್ಟಿ ಹಿಂಜರಿಯುತ್ತಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

  ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ಭಾರತದ ಗಡಿ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿರುವ ಬಗ್ಗೆ ಟ್ವೀಟ್‌ ಮಾಡಿರುವ ಅವರು ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಅತಿಕ್ರಮಣದ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!