ಧಾರ್ಮಿಕ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ (ಬೇಕಲ್ ಉಸ್ತಾದ್ ) ನಿಧನ

Prasthutha|

ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ತಾಜುಲ್ ಫುಖಹಾಅ್, ಅಲ್ಹಾಜ್ ಪಿ.ಎಂ.ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ಆಸ್ಪತ್ರೆಯಲ್ಲಿ ನಿಧನರಾದರು.

ಬೇಕಲ್ ಉಸ್ತಾದ್ ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಅವರು, ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

- Advertisement -

ದೇವಬಂದ್ ಅರಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದ ಅವರು,  ಧಾರ್ಮಿಕ ವಿಷಯದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ಮಾತ್ರವಲ್ಲ, ಇಸ್ಲಾಮಿಕ್ ಭೂಗೋಳ, ಅರ್ಥಶಾಸ್ತ್ರ, ಕರ್ಮ ಶಾಸ್ತ್ರ ಮೊದಲಾದ ವಿಷಯಗಳ ತಜ್ಞರಾಗಿದ್ದರು. ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದ ಅವರು, ‘ಬೇಕಲ್ ಉಸ್ತಾದ್’ ಎಂದೇ ಅರಿಯಲ್ಪಟ್ಟಿದ್ದರು.

ಬೇಕಲ್ ಉಸ್ತಾದ್ ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -