ಶೆಟ್ಟರ್​ ಗೆ ಬೆಳಗಾವಿ ಬಿಜೆಪಿ ಟಿಕೆಟ್: ಮಂಗಳಾ ಅಂಗಡಿಗೆ ನಿರಾಸೆ

Prasthutha|

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.

- Advertisement -

ಬೆಳಗಾವಿ ಕ್ಷೇತ್ರದಿಂದ ಜಗದೀಶ್​ ಶೆಟ್ಟರ್​ ಅವರಿಗೆ ಬಿಜೆಪಿ ಟಿಕೆಟ್​ ಫಿಕ್ಸ್ ಆಗಿದೆ ಎಂದು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಎರಡನೇ ಲಿಸ್ಟ್​ನಲ್ಲಿ ನಮ್ಮ ಕುಟುಂಬದ ಹೆಸರು ಬರಲಿಲ್ಲ. ಹೀಗಾಗಿ ನಾವು ಹೈಕಮಾಂಡ್​​ ಭೇಟಿಯಾಗಲು ಹೋಗಿದ್ದೆವು. ಅಷ್ಟರೊಳಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವ ವಿಚಾರ ನಡೆದಿತ್ತು. ಹೀಗಾಗಿ ದೆಹಲಿಯಿಂದ ವಾಪಸ್ ಆಗಿದ್ದೇವೆ. ಶೆಟ್ಟರ್ ಮೊದಲು ಬೆಳಗಾವಿಯಿಂದ ಬೇಡ ಎಂದು ಹೇಳಿದ್ದರು. ಆದರೆ ವರಿಷ್ಠರು ನೀವೇ ನಿಂತುಕೊಳ್ಳಬೇಕೆಂದು ಹೇಳಿದ್ದಾರೆ. ಶೆಟ್ಟರ್​ಗೆ ಟಿಕೆಟ್ ಕೊಟ್ಟರೆ ಅವರ ಜತೆ ಪ್ರಚಾರ ಮಾಡುತ್ತೇನೆ ಎಂದರು.

- Advertisement -

ನನ್ನ ಮಕ್ಕಳಾದ ಶ್ರದ್ಧಾ ಅಥವಾ ಸ್ಪೂರ್ತಿ ಅವರಿಗೆ ಟಿಕೆಟ್ ಕೊಡಬೇಕು ಅನ್ನುವುದು ನನ್ನ ಆಸೆ ಆಗಿತ್ತು. ಟಿಕೆಟ್ ಸಿಗದಿರುವುದರಿಂದ ಸ್ವಲ್ಪ ನಿರಾಸೆಯಾಗಿದೆ ಎಂದರು.



Join Whatsapp