Home ಟಾಪ್ ಸುದ್ದಿಗಳು ಬೆಳಗಾವಿ ಗಡಿ ವಿವಾದ; ಸರ್ವಪಕ್ಷಗಳ ಸಭೆ ನಡೆಸಲು ಸಿದ್ದರಾಮಯ್ಯ ಆಗ್ರಹ

ಬೆಳಗಾವಿ ಗಡಿ ವಿವಾದ; ಸರ್ವಪಕ್ಷಗಳ ಸಭೆ ನಡೆಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ, ತಕ್ಷಣವೇ ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಇದೇ 23ರಂದು ವಿಚಾರಣೆ ನಡೆಸಲಿದೆ. ಅದನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆಭರದ ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಆ ರಾಜ್ಯ ರಚಿಸಿದೆ. ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಇದು ಸಾಕ್ಷಿ’ ಎಂದು ಹೇಳಿದ್ದಾರೆ.
‘ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸಲಿದೆ. ಕಾಲವ್ಯಯ ಮಾಡದೆ‌ ಮುಖ್ಯಮಂತ್ರಿ ವಿರೋಧಪಕ್ಷಗಳ ಸಭೆ ಕರೆಯಬೇಕು’ ಎಂದರು.

Join Whatsapp
Exit mobile version