Home ಟಾಪ್ ಸುದ್ದಿಗಳು ಬೆಳಗಾವಿ ಗಡಿ ವಿವಾದ: ‘ಮಹಾ’ ಸಚಿವರ ಆಗಮನ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಬೆಳಗಾವಿ ಗಡಿ ವಿವಾದ: ‘ಮಹಾ’ ಸಚಿವರ ಆಗಮನ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಬೆಳಗಾವಿಗೆ ಮಹಾರಾಷ್ಟ್ರದ ಸಚಿವರ ಆಗಮನವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿವೆ.


ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್‌ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಅವರು ಡಿಸೆಂಬರ್ 6ರಂದು ಬೆಳಗಾವಿಗೆ ಆಗಮಿಸುವುದಾಗಿ ಹೇಳಿದ್ದರು. ಇದನ್ನು ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಲು, ಬೆಂಗಳೂರಿನಿಂದ ವಿವಿಧ ಕನ್ನಡ ಸಂಘಟನೆಗಳು ಬೆಳಗಾವಿಯತ್ತ ಮುಖಮಾಡಿವೆ. ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸುತ್ತಿರುವ ಕಾರ್ಯಕರ್ತರು, ಮಹಾರಾಷ್ಟ್ರದ ನಾಯಕರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.


ಮಹಾರಾಷ್ಟ್ರ ರಾಜ್ಯದ ನಾಯಕರಿಗೆ ಬೆಳಗಾವಿ ಪ್ರವೇಶಿಸಲು ನಿರ್ಬಂಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದು, ಪ್ರಾಣ ಕೊಡುತ್ತೇವೆ ಆದರೆ ಮಹಾರಾಷ್ಟ್ರಕ್ಕೆ ಬೆಳಗಾವಿ ಹೋಗಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿದರು.


ಜಿಲ್ಲಾಧಿಕಾರಿ ಕಚೇರಿಯವರೆಗೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದರು. ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಪ್ರಮುಖ ಮಾರ್ಗಗಳಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಬ್ಯಾರಿಕೇಡ್‌ ಅಳವಡಿಸಿದ್ದಾರೆ.

Join Whatsapp
Exit mobile version