ಬೆಳಗಾವಿ ಜೋಡಿ ಕೊಲೆ: ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸರು ಸಸ್ಪೆಂಡ್

Prasthutha|

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ  ಮಾರಿಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

- Advertisement -

ಮಾರಿಹಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ.ಎನ್. ಬಳಗಣ್ಣವರ, ಆರ್.ಎಸ್. ತಳೇವಾಡ ಅಮಾನತುಗೊಂಡವರು.

ಕಳೆದ ಎರಡು ದಿನಗಳ ಹಿಂದೆ ಸುಳೇಭಾವಿ ಗ್ರಾಮದಲ್ಲಿ ರಣಧೀರ್ ಅಲಿಯಾಸ್ ಮಹೇಶ ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. 

- Advertisement -

ಇತ್ತ ಸುಳೇಭಾವಿ ಗ್ರಾಮದ ಬೀಟ್ ಪೊಲೀಸರಾಗಿದ್ದ ಈ ಇಬ್ಬರೂ ಕರ್ತವ್ಯ ಲೋಪ ಎಸಗಿದ್ದಾರೆ. ಗ್ರಾಮದಲ್ಲಿನ ಆಗುಹೋಗುಗಳ ಬಗ್ಗೆ ಸರಿಯಾಗಿ ಮಾಹಿತಿ ಸಂಗ್ರಹಿಸದೇ ಅದನ್ನು ಹತೋಟಿಗೆ ತರಲು ಪ್ರಯತ್ನಿಸಿಲ್ಲ. ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಕಮಿಷನರ್ ಬೋರಲಿಂಗಯ್ಯ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Join Whatsapp