ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಮೂವರು ಆರೋಪಿಗಳ ಬಂಧನ

Prasthutha|

ಬೆಳಗಾವಿ: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ದುಷ್ಕರ್ಮಿಗಳು ಬೆಳಗಾವಿಯ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ, ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿ ವಿಕೃತಿ ಮೆರೆದಿದ್ದರು.

- Advertisement -

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಎಂದು ಗುರುತಿಸಲಾಗಿದೆ.

Join Whatsapp