ಬೆಳಗಾವಿ : ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶದ ನಾಗರಿಕರಿಗೆ ಮಕ್ಕಳನ್ನು ಮನೆಯಿಂದ ಹೊರಗೆ ಬಿಡದಂತೆ ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದ್ದು, 11 ಖಾಸಗಿ ಶಾಲೆಗಳಿಗೆ ಹಾಗೂ ಗ್ರಾಮೀಣ ಭಾಗದ ಒಂಬತ್ತು ಸರಕಾರಿ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಬಸವಾರಾಜ ನಾಲತವಾಡ ಮತ್ತು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಆದೇಶ ಹೊರಡಿಸಿದ್ದಾರೆ.
ಚಿರತೆ ಹಿಡಿಯಲು ಕಳೆದ 2 ದಿನಗಳಿಂದಲೂ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈವರೆಗೂ ಚಿರತೆ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.